ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್ಆರ್ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.