ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ…
ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು. ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಗೆ ಕರೆತಂದರೂ ಡಾ.ಭುಜಂಗ ಶೆಟ್ಟಿ ಬದುಕುಳಿಯಲಿಲ್ಲ. ಸದ್ಯ ಮೃತದೇಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿದೆ.