ನೂತನ ಸರಕಾರ ಅಸ್ತಿತ್ವಕ್ಕೆ ಬಂದಿದೆ.ಇಂದಿನಿಂದ ಸಿದ್ದಾಮಯ್ಯ ಅವರ ನೇತೃತ್ವದ ಸರಕಾರ ತನ್ನ ಕಾರ್ಯಾರಂಭ ಆರಂಭಿಸಿದೆ.ಈ ನಡುವೆ ಸರಕಾರಿ ನೌಕರರು ಕೂಡ ಹೊಸ ಸರಕಾರದ ಮೇಲೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದ್ದಾರೆ.ಬಾಕಿ ಇರುವ ಸರಕಾರಿ ನೌಕರರ ತುಟ್ಟಿ ಭತ್ಯೆ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ..
ಮಾನ್ಯ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು.
ವಿಷಯ: ಕರ್ನಾಟಕ ಸರ್ಕಾರಿ ನೌಕರರಿಗೆ ದಿ:01-01-2023ರಿಂದ ಬಾಕಿ ಇರುವ ರಾಜ್ಯ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ. ಉಲ್ಲೇಖ: ಕೇಂದ್ರ ಸರ್ಕಾರದ ಆದೇಶದ ದಿನಾಂಕ: 03-04-2023
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ: 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4% ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರಿ ನೌಕರರಿಗೂ ಶೇ. 4% ತುಟ್ಟಿಭತ್ಯೆ ಬಿಡುಗಡೆ ಮಾಡಲು ಸಂಘವು ಮನವಿ ಮಾಡಿತ್ತು. ಸದರಿ ಕಡತವನ್ನು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಪ್ರಯುಕ್ತ ಬಾಕಿ ಇಡಲಾಗಿತ್ತು.
ಪ್ರಸ್ತುತ ನೀತಿ ಸಂಹಿತೆಯು ಅಂತ್ಯಗೊಂಡಿರುವುದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-01-2023 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ.
ವಂದನೆಗಳೊಂದಿಗೆ,ತಮ್ಮ ವಿಶಾಸ್ವಿ..
ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು,
ಆರ್ಥಿಕ ಇಲಾಖೆ,
ಬೆಂಗಳೂರು.
ಮಾನ್ಯರೆ,
ಕರ್ನಾಟಕ ಸರ್ಕಾರ,
ದಿನಾಂಕ: 20-05-2023
ವಿಷಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-01-2023ರಿಂದ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ. ಉಲ್ಲೇಖ: ಕೇಂದ್ರ ಸರ್ಕಾರದ ಆದೇಶದ ದಿನಾಂಕ: 03-04-2023
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ: 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರಿ ನೌಕರರಿಗೂ ಶೇ. 4% ತುಟ್ಟಿಭತ್ಯೆ ಬಿಡುಗಡೆ ಮಾಡಲು ಸಂಘವು ಮನವಿ ಮಾಡಿತ್ತು. ಸದರಿ ಕಡತವನ್ನು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಪ್ರಯುಕ್ತ ಬಾಕಿ ಇಡಲಾಗಿತ್ತು.
ಪ್ರಸ್ತುತ ನೀತಿ ಸಂಹಿತೆಯು ಅಂತ್ಯಗೊಂಡಿರುವುದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-01-2023 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ.
ವಂದನೆಗಳೊಂದಿಗೆ.
ಸಿ.ಎಸ್.ಷಡಾಕ್ಷರಿ.
ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ…