ಮುಖ್ಯ ಮಂತ್ರಿಯಾದ ಎರಡೇ ದಿನದಲ್ಲೆ ಒಳ್ಳೆಯ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ..
ಸಿಎಮ್ ಬರುತ್ತಿದ್ದಾರೆ ಎಂದರೆ ಪೋಲಿಸ್ ಇಲಾಖೆಗೆ ತಲೆನೋವಾಗಿತ್ತು.ಜೊತೆಗೆ ಸಾರ್ವಜನಿಕರು ಕೂಡ ಕಿರಿ ಕಿರಿ ಅನುಭವಿಸುತ್ತಿದ್ದರು. ಸ್ವತಃ ಸಿಎಮ್ ಅವರೆ ಜೀರೋ ಟ್ರಾಪಿಕ್ ಸೌಲಭ್ಯ ಹಿಂಪಡೆಯುವಂತೆ ಬೆಂಗಳೂರು ನಗರ ಪೋಲಿಸ್ ಆಯುಕ್ತರಿಗೆ ತಿಳಿಸಿದ್ದಾರೆ..ಇದು ರಾಜ್ಯಾದ್ಯಂತ ವಿಸ್ತರಣೆಯಾದರೆ ಒಳ್ಳೆಯದು ಎಂಬ ಮಾತು ಕೇಳಿ ಬರುತ್ತಿದೆ..
ಬೆಂಗಳೂರ: ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯವರು ಟ್ವಿಟ್ ಮುಖಾಂತರ ತಿಳಿಸಿದ್ದಾರೆ..
ಸಿಎಮ್ ಅವರ ತಮ್ಮ ಈ ನಿರ್ಧಾರದಿಂದ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ. ಹೀಗೆ ಪ್ರತಿಯೊಂದು ಸಮಸ್ಯೆಯನ್ನು ಅರಿತುಕೊಂಡು ಇಂತಹ ನಿರ್ಧಾರ ತೆಗೆದುಕೊಂಡರೆ ಸರಕಾರದ ಮೇಲೆ ಜನಸಾಮಾನ್ಯರ ನಂಬಿಕೆ ಹೆಚ್ಚಾಗುತ್ತದೆ..