ದಾಖಲೆ ಇಲ್ಲದೆ ೧ ಕೋಟಿ ರೂಪಾಯಿಗೂ ಅಧಿಕ ಹಣ ವಶಪಡಿಸಿಕೊಂಡ ಪೋಲಿಸರು..ಯಾರಿವರು? ಅಂತ ನೀವೆ ನೋಡಿ..
ಗದಗ: ದಾಖಲೆ ಇಲ್ಲದೆ ಕಾರಲ್ಲಿ ಸಾಗಿಸುತ್ತಿದ್ದ ಸುಮಾರು 1 ಕೋಟಿ 70 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ..
ನರಗುಂದ ಪೊಲೀಸರ ಭರ್ಜರಿ ಕಾರ್ಯಚರಣೆ ನಡೆಸಿ ದಾಖಲೆ ಇಲ್ಲದೇ ಕಾರಲ್ಲಿ ಹಣ ಸಾಗಿಸುತ್ತಿದ್ದ ಆರೋಪಿಗಳನ್ನು ಹಿಡಿದಿದ್ದಾರೆ.ವಿಕ್ರಂ ಸಿಂಗ್ ಹಾಗೂ ಚಾಲಕ ಶಿವಬಸಯ್ಯ ಹಿರೇಮಠ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕ್ರೇಟಾ ಕಾರಿನಲ್ಲಿ 1 ಕೋಟಿ 70 ಲಕ್ಷ ರೂಪಾಯಿ ಹಣವನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯ ಯಿಂದ ಹುಬ್ಬಳ್ಳಿ ಕಡೆಗೆ ಹಣ ಸಾಗಿಸ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.