ಸಿಎಮ್ ಆಪ್ತ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಎಮ್ ಮಾದ್ಯಮ ಸಲಹೆಗಾರ ಸೇರಿದಂತೆ ಹಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ..
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕೆಲ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಸಿಎಂ ಆಪ್ತ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಿಎಂ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆ ಎ ಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.