ಸರಕಾರಿ ಶಾಲೆಯ ಸಹ ಶಿಕ್ಷಕ ನೇಣು ಬಿಗಿದುಕೊಂಡು ಆತ್ಯಹತ್ಯೆಗೆ ಶರಣು!! ತಂದೆಗೆ ಹೃದಯ ಖಾಯಿಲೆ ಇದ್ದಿದ್ದೇ ಸಾವಿಗೆ ಕಾರಣವಾಯಿತೆ?
ಗಜೇಂದ್ರಗಡ: ಪಟ್ಟಣದ ಸರಾಫ್ ಬಜಾರದ ನಿವಾಸಿಯಾಗಿದ್ದ ಗಜೇಂದ್ರಗಡ-ರೋಣ ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ, ಹಿರೇಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಈಶ್ವರಪ್ಪ ಅಂದಾನಪ್ಪ ರೇವಡಿ (57) ಸೋಮವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಮ್ಮ ತಂದೆಗೆ ಹೃದಯ ಕಾಯಿಲೆ ಇತ್ತು. ಅದು ಗುಣಮುಖವಾಗುವುದಿಲ್ಲ ಎಂದು ಮಾನಸಿಕವಾಗಿ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅವರ ಪುತ್ರಿ ನಿವೇದಿತಾ ಈಶ್ವರಪ್ಪ ರೇವಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಟ್ಟಣದ ಹೊರ ವಲಯದಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.