ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದಿಂದ ಮಹತ್ಬದ ಸಂದೇಶ:
ಆಯೋಗದ ಕಾರ್ಯದರ್ಶಿ ಹಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ಏನು ಹೇಳಿದ್ದಾರೆ ನೋಡಿ…
ಬೆಂಗಳೂರು : ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ಅವಧಿಯನ್ನು ಆರು ತಿಂಗಳು ವಿಸ್ತರಿಸಿದ ಬೆನ್ನಲ್ಲೇ ಆಯೋಗವು ಯಾವುದೇ ಗೊಂದಲಗಳಿಲ್ಲದೆ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದ್ದು, ಈಗಾಗಲೇ ಪ್ರಶ್ನೋತ್ತರ ಮಾದರಿಯಲ್ಲಿ ತಮ್ಮ ಅಭಿಪ್ರಾಯ, ಬೇಡಿಕೆ ಮಂಡಿಸಿರುವ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳಿಗೆ, ನೌಕರರಿಗೆ, ಸಾರ್ವಜನಿಕರಿಗೆ ಮತ್ತೊಮ್ಮೆ ತಮ್ಮ ಬೇಡಿಕೆಗಳನ್ನು ಸ್ಪಷ್ಟಪಡಿಸಲು ಅವಕಾಶ ನೀಡಿದೆ.
ಇದಕ್ಕಾಗಿ ಆಯೋಗವು ಮೇ. 26ರ ರಂದು ವಿಶೇಷ ಸಭೆ ಕರೆದಿದ್ದು, ಆಸಕ್ತರು ಬೇಡಿಕೆಗಳ ಸೂಕ್ತ ಪಿಪಿಟಿಯೊಂದಿಗೆ ಸಭೆಗೆ ಆಗಮಿಸಿ ತಮ್ಮ ವಾದವನ್ನು ಮಂಡಿಸಬೇಕೆಂದು ಆಯೋಗವು ಕೋರಿದೆ. ಈ ಸಂದರ್ಭದಲ್ಲಿ ಬೇಡಿಕೆಗಳ ಕುರಿತು ಚರ್ಚಿಸಲಾಗುತ್ತದೆ. ಪಿಪಿಟಿಯಲ್ಲಿ ಪ್ರಶ್ನಾವಳಿಯ ಉತ್ತರಗಳು, ಬೇಡಿಕೆಗಳು ಮತ್ತು ಇತರೆ ವಿಷಯಗಳ ಸಂಕ್ಷಿಪ್ತ ಮಾಹಿತಿ ಇರಬೇಕು. ಮಾಹಿತಿಯು ವಸ್ತುನಿಷ್ಠ ಹಾಗು ನಿರ್ದಿಷ್ಟವಾಗಿರಬೇಕು ಹಾಗೂ ಹತ್ತು ಸ್ಲೈಡ್ಗಳಿಗೆ ಸಮೀತವಾಗಿರಬೇಕು. ಮಾಹಿತಿಯು ಸ್ಲೈಡ್ಗಳಲ್ಲಿ ಪುನರಾವರ್ತನೆಯಾಗಬಾರದು ಎಂದು ಸೂಚಿಸಲಾಗಿದೆ.
ಈ ಸಭೆಯು ವೇತನ ಆಯೋಗದ ಕಚೇರಿಯ ಸಭಾ ಕೊಠಡಿಯಲ್ಲಿಯೇ ನಡೆಯಲಿದ್ದು, ಪೂರ್ವ ಸಿದ್ಧತೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಆಯೋಗದ ಕಾರ್ಯದರ್ಶಿ ಹಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಈ ಕುರಿತಂತೆ ಪಬ್ಲಿಕಟುಡೆಯೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ,ನಾಳೆಯ ಸಭೆಯಲ್ಲಿ ನಾವು ಕೂಡ ಪಾಲ್ಗೊಳ್ಳಲಿದ್ದೇವೆ,ಚರ್ಚೆಯಾದ ನಂತರ ನಮ್ಮ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ ಎಂದರು.ಈಗಾಗಲೇ ಏಳನೇ ವೇತನ ಆಯೋಗಕ್ಕೆ ನಮ್ಮ ವರದಿಯನ್ನು ನೀಡಿದ್ದೇವೆ.ಎಲ್ಲ ಸಂಘ ಸಂಸ್ಥೆಗಳನ್ನು ಈ ಸಭೆಗೆ ಆಹ್ವಾನಿಸಲಾಗಿದೆ.ಆದ್ರೆ ಮೋದಲಿನ ಆದ್ಯತೆ ನಮಗೆ ನೀಡಲಾಗಿದೆ ಎಂದರು.ಸಭೆಯ ನಂತರ ಮತ್ತೊಮ್ಮೆ ಮಾದ್ಯಮಗಳ ಜೊತೆ ಮಾತನಾಡುವೆ ಎಂದರು..