ಸರಕಾರಿ ನೌಕರರ ಸಂಘ ಬರೆದಿದ್ದ ಮನವಿ ಪತ್ರಕ್ಕೆ ಸ್ಪಂದಿಸಿದ ರಾಜ್ಯ ಸರಕಾರ..ಶೀಘ್ರವೇ ತುಟ್ಟಿ ಭತ್ಯೆ ಹೆಚ್ಚಳ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ.ರಾಜ್ಯ ಸರ್ಕಾರಿ ನೌಕರರ ಶೇ 4.ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ಬಗ್ಗೆ ಆರ್ಥಿಕ ಇಲಾಖೆ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಿದೆ. ಸರ್ಕಾರಿ ನೌಕರರು ಬಹುದಿನಗಳಿಂದ ಕಾಯುತ್ತಿದ್ದ ತುಟ್ಟಿಭತ್ಯೆ ಏರಿಕೆಯ ಬಗ್ಗೆ ಸದ್ಯದಲ್ಲೆ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಲಿದೆ. ಈ ಕುರಿತು ಸಿ. ಎಸ್. ಷಡಾಕ್ಷರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ..
ಕಳೆದ ವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ತುಟ್ಟಿಭತ್ಯೆ ಬಿಡುಗಡೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದರು.