ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ ಪತ್ರವೊಂದು ಎಲ್ಲೇಡೆ ವೈರಲ್ ಆಗಿದೆ. ಆದ್ರೆ ರಾಜ್ಯ ಸರಕಾರದಿಂದ ಅಧಿಕೃತವಾಗಿ ಯಾವುದೇ ಖಾತೆಗಳು ಹಂಚಿಕೆಯಾಗಿಲ್ಲ..
ಈಗಾಗಲೇ ಕೆಲ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.ಆದ್ರೆ ಅಧಿಕೃತವಾಗಿ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದು ನಕಲಿ ಪಟ್ಟಿಯಾಗಿದೆ.
ಶನಿವಾರ ರಾಜಭವನದಲ್ಲಿ 24 ಮಂದಿ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೌಪಚಾರಿಕ ಸಂಪುಟ ಸಭೆ ನಡೆಸಿದರು. ಇದೇ ವೇಳೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು.
ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷವು, ‘ಇನ್ನೂ ಯಾವುದೇ ಸಚಿವರಿಗೆ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ’ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.