ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ..
ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು ಅಭಿನಂದನೆ ಸಲ್ಲಿಕೆ..
ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..
ಬೆಂಗಳೂರ: ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿಕ್ಷಕರ ಪರವಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ ಶೇ 4% ತುಟ್ಟಿಭತ್ಯೆಯನ್ನು ಅವರಿಗೆ ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದಿಸಿ ಆರ್ಥಿಕ ಇಲಾಖೆಗೆ ರವಾನಿಸಿದ ಪ್ರಯುಕ್ತ ಅವರನ್ನು ರಾಜ್ಯದ ಸಮಸ್ತ ನೌಕರರ ಪರವಾಗಿ ಅಭಿನಂದಿಸಲಾಯಿತು.
ಸೋಮವಾರದಂದು ಆರ್ಥಿಕ ಇಲಾಖೆಯಿಂದ ಆದೇಶ ಹೊರಡಿಸಲು ವಿನಂತಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಹಾಗೂ ಶಿಕ್ಷಕರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ಹಾಗೂ ರಾಜ್ಯದ ಶಿಕ್ಷಕರ ಜ್ವಲಂತ ಸಮಸ್ಯೆಗಳಾದ ವರ್ಗಾವಣೆ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡಾ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯಲಾಯಿತು ಮತ್ತು ಶಿಕ್ಷಕರ, ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಂದು ಸಭೆಯನ್ನು ನಿಗದಿಗೊಳಿಸಲು ವಿನಂತಿಸಲಾಗಿದೆ.