ಈಗಾಗಲೇ ರಾಜ್ಯಾದ್ಯಂತ ಪಠ್ಯ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ವಿತರಿಸಲಾಗಿದೆ. ೨೦೨೩_೨೦೩೪ ರ ಶೈಕ್ಷಣಿಕ ವರ್ಷ ಆರಂಭವಾಗಿದೆ.
ರಾಜ್ಯದಲ್ಲಿನ ಪಠ್ಯ ಪುಸ್ತಕ ಬಹಿಷ್ಕರಿಸಿ,ಮಕ್ಕಳಿಗೆ ಹೊಸ ಪುಸ್ತಕ ನೀಡುವಂತೆ ಸಿಎಮ್ ಸಿದ್ದರಾಮಯ್ಯನವರಿಗೆ ಸಮಾನ ಮನಸ್ಕರರ ಒಕ್ಕೂಟ ಮನವಿ ಮಾಡಿದೆ..
ಬೆಂಗಳೂರ: ರಾಜ್ಯದಲ್ಲಿನ ಶಾಲಾ ಮಕ್ಕಳ ಪಠ್ಯ ಪುಸ್ತಕವನ್ನು ಪರಿಷ್ಕರಿಸಿ, ಮಕ್ಕಳಿಗೆ ಹೊಸ ಪುಸ್ತಕಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾನ ಮನಸ್ಕರ ಒಕ್ಕೂಟ ಮನವಿ ಮಾಡಿಕೊಂಡಿದೆ.
ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ.ಸಿದ್ದರಾಮಯ್ಯ ನೇತೃತ್ವದ, ಪ್ರೊ.ರವಿವರ್ಮಕುಮಾರ್, ಪ್ರೊ.ರಾಜೇಂದ್ರ ಚಿನ್ನಿ, ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಪ್ರೊ.ಎಲ್.ಎನ್.ಮುಕುಂದರಾಜ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ಡಾ.ವಸುಂಧರಾ ಭೂಪತಿ, ಡಾ.ನಿರಂಜನಾರಾಧ್ಯ ಮುಂತಾದವರನ್ನು ಒಳಗೊಂಡ ಈ ಒಕ್ಕೂಟ ಸಭೆ ನಡೆಸಿ, ಸುದೀರ್ಘ ಪತ್ರದ ಮುಖೇನ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ.
ಹಿಂದಿನ ಸರ್ಕಾರ ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುವ ಮೂಲಕ ಹಾಳು ಮಾಡಿದ್ದಲ್ಲದೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು .
ಪೊಳ್ಳು ರಾಷ್ಟ್ರೀಯತೆಯ ಹೆಸರಿನಲ್ಲಿ ಎಳೆ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡಿತ್ತು. ಹೀಗಾಗಿ ಈಗಾಗಲೇ ಮುದ್ರಿತವಾಗಿ ಬಿಇಒ ಕಚೇರಿ/ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಯಥಾವತ್ತಾಗಿ ಮಕ್ಕಳಿಗೆ ವಿತರಿಸದಿರಲು ಸ್ಪಷ್ಟ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು ಎಂದು ಒಕ್ಕೂಟ ಮನವಿ ಮಾಡಿಕೊಂಡಿದೆ.ಮಾತ್ರವಲ್ಲ ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ತೆಗೆದು ಹಾಕಿ ವಿತರಿಸಲು ಆಯಾ ವ್ಯಾಪ್ತಿಯ ಸಿಆರ್ಪಿ ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು. ಜೊತೆಗೆ, ಈ ವಿಷಯಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಲು ಸ್ಪಷ್ಟ ಸೂಚನೆ ನೀಡಬೇಕು. ಅಲ್ಲದೆ ಈ ಎಲ್ಲಾ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಒಕ್ಕೂಟ ಕೋರಿಕೊಂಡಿದೆ.
ಈ ಸಂದರ್ಭದಲ್ಲಿ ಸಿಎಮ್ ಸಿದ್ದರಾಮಯ್ಯ ನವರು ಮಾತನಾಡಿ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯಾತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಹೊಸ ಶಿಕ್ಷಣ ನೀತಿ ಹೆಸರಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೇಬ್ಬಿಸಲು ಅವಕಾಶ ಕೋಡುವುದಿಲ್ಲ.ಮತ್ತೊಮ್ಮೆ ಪ್ರತ್ಯೆಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತಿರ್ಮಾನಗಳನ್ನು ತೆಗೆದುಕೊಳ್ಳಲಾಗುವುದೆಂದರು..