ಶಿಕ್ಷಣವೇ_ಶಕ್ತಿ
ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮದ ಪ್ರಯುಕ್ತ ಇಂದು ದೇವನಹಳ್ಳಿ ತಾಲ್ಲೂಕಿನ ಅರದೇಶಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವನಪುರದ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆಯ ಸರ್ಕಾರಿ ಫ್ರೌಢ ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಪ್ರೋತ್ಸಾಹಕಗಳಾದ ಪಠ್ಯ, ಪುಸ್ತಕ ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿ, ಶಾಲಾ ಪುನರಾರಂಭಕ್ಕೆ ಸಿಹಿ ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಿರಲೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾರೈಸಿ ಶುಭಕೋರಿದ್ದಾರೆ..
ನಂತರ ಮಕ್ಕಳೊಂದಿಗೆ ಹಾಗೂ ಶಿಕ್ಷಕ ವೃಂದದೊಂದಿಗೆ ಶಾಲೆಯ ಸಮಸ್ಯೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ಗುಣಮಟ್ಟದ ಶಿಕ್ಷಣ ನೀಡುವಂತೆ ಸಲಹೆ ನೀಡಿದರು..