ಕರ್ತವ್ಯ ಸಮಯದಲ್ಲಿ ಲಂಚ ಪಡೆಯುತ್ತಿರುವ ಮಹಿಳಾಧಿಕಾರಿ ವಿಡಿಯೋ ವೈರಲ್ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ..
ತುಮಕೂರು: ಕರ್ತವ್ಯ ಸಮಯದಲ್ಲಿ ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಮುದ್ರಾಂಕ ಇಲಾಖೆ ಆಯುಕ್ತರು ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗುಬ್ಬಿ ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ವಿರುದ್ಧ ಆದೇಶ ಹೊರಡಿಸಲಾಗಿದೆ. ಈಕೆ ಕರ್ತವ್ಯದ ಸಮಯದಲ್ಲಿ ಲಂಚ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.