ರಾಜ್ಯದ ಎಲ್ಲ ಶಾಲಾ_ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನ ಪ್ರಸ್ರಾವನೆ ಓದುವಂತೆ ಆದೇಶ…
ಬೆಂಗಳೂರ: ಸಮಾಜ ಕಲ್ಯಾಣ ಇಲಾಖೆ ಖಾತೆ ಸಚಿವ ಡಾ ಎಚ್ಸಿ ಮಹದೇವಪ್ಪ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಕರ್ನಾಟಕದಾದ್ಯಂತ ಎಲ್ಲ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದುವಂತೆ ಪೂರಕ ಆದೇಶ ನೀಡುವಂತೆ ತಿಳಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ಸಚಿವ ಮಹದೇವಪ್ಪ ಅಧಿಕಾರಿಗಳ ಸಭೆ ನಡೆಸಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಬೇಕು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಎಂದು ತಿಳಿದು ಬಂದಿದೆ.
ಸಭೆಯಲ್ಲಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿಳಂಬ ಕಾರಣಕ್ಕಾಗಿ ಕಾಲೇಜು ದಾಖಲಾತಿ ಸಮಸ್ಯೆ ಆಗುತ್ತಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ನಲ್ಲಿ ಕೇಂದ್ರ ಸರ್ಕಾರದಿಂದ ಶೇಕಡ 60 ಹಾಗೂ ರಾಜ್ಯದಿಂದ ಶೇಕಡ 40 ಪಾಲಿದೆ. ಈ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂವಿಧಾನದ ಬದ್ಧವಾಗಿ ಕೆಲಸ ಮಾಡಲು ಪ್ರಮಾಣ ವಚನ ಸ್ವೀಕಾರ ಮಾಡಿದ್ದೇವೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಆದ್ರೆ ಸರಕಾರದಿಂದ ಅಧಿಕೃತ ಆದೇಶ ಬಂದಿಲ್ಲ..ಮುಂದಿನ ದಿನಗಳಲ್ಲಿ ಸರಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡೊಣ…