ಬೆಂಗಳೂರು: ಹೆಚ್ಚುವರಿ ಶಿಕ್ಷಕರ_ಮರು ಹೊಂದಾಣಿಕೆಯಲ್ಲಿ ಸಾಕಷ್ಟು ಗೊಂದಲಗಳಿದ್ದವು, ಹೀಗಾಗಿ ನಾಲ್ಕು ತಿಂಗಳ ಹಿಂದೆ ನಡೆಯಬೇಕಿದ್ದ ಕೌನ್ಸಲಿಂಗ್ ಗೆ ತಡೆಹಿಯಲಾಗಿತ್ತು.ಸದ್ಯ ರಾಜ್ಯ ಸರಕಾರ ಪರಿಷ್ಕೃತ ವೇಳಪಟ್ಟಿ ಬಿಡುಗಡೆ ಮಾಡಿದೆ…
ಈ ಕುರಿತು ಕರ್ನಾಟಕ ರಾಜ್ಯ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಅಶೋಕ ಸಜ್ಜನ ಮಾತನಾಡಿ, ಆರು ವರ್ಷಗಳಲ್ಲಿ ಕೇವಲ ಎರಡು ಬಾರಿ ಮಾತ್ರ ಶಿಕ್ಷಕರ ವರ್ಗಾವಣೆ ಆಗಿದೆ. ಸರಕಾರ ಈಗಲಾದರೂ ಪರಿಷ್ಕೃತ ವೇಳಾಪಟ್ಟಿ ಬಿಡುಡಗೆ ಮಾಡಿದ್ದು, 87 ಸಾವಿರ ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ.ಶಿಕ್ಷಕರಿಗೆ ಸಂತೋಷ ತಂದಿದೆ ಸರಕಾರ ಕೂಡಲೇ ಯಾವುದೇ ಗೊಂದಲಗಳಾಗದಂತೆ ಶಿಕ್ಷಕರ ವರ್ಗಾವಣೆ ನಡೆಸಲಿ ಎಂಬುದು ನಮ್ಮ ಆಶಯವಾಗಿದೆ ಎಂದರು…