ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್: ನಮ್ಮ ರಾಜ್ಯದಲ್ಲೂ ಸರಕಾರಿ ನೌಕರರಿಗೆ ಓಪಿಎಸ್ ಗ್ಯಾರೆಂಟಿ..
ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿತ್ತು. ಇದನ್ನು ಜಾರಿ ಮಾಡುವುದಾಗಿಯೂ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲೂ ಘೋಷಿಸಿತ್ತು. ಈ ಬೆನ್ನಲ್ಲೇ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆOPS ಜಾರಿಗೊಳಿಸುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದಂತ ಐದು ಗ್ಯಾರಂಟಿ ಭರವಸೆಗಳನ್ನು ಈಗ ಏಕಕಾಲದಲ್ಲೇ ಜಾರಿಗೊಳಿಸುವಂತ ನಿರ್ಧಾರವನ್ನು ಪ್ರಕಟಿಸಿದ್ದೇವೆ. ಜಾರಿಯೂ ಮಾಡಿದ್ದೇವೆ ಎಂದರು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದವು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆ ಪಿಂಚಣಿ ಜಾರಿಗೊಳಿಸುವುದಾಗಿದೆ. ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ NPS ರದ್ದುಗೊಳಿಸಿ, OPS ಜಾರಿಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಶೀಘ್ರವೇ ಸಿಎಂ ಸಿದ್ಧರಾಮಯ್ಯ ಈ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.