ಸನ್ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರಿಗೆ ಸನ್ಮಾನ..
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ಡಾ.ಲತಾ.ಎಸ್.ಮುಳ್ಳೂರಸಂಸ್ಥಾಪಕ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನೂತನ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಮಧುಬಂಗಾರಪ್ಪನವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಡಾ.ಲತಾ .ಮುಳ್ಳೂರ ಅವರು ಮಾತನಾಡಿ ಶಿಕ್ಷಕಿಯರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಹೆಚ್ಚುವರಿ, ಕೋರಿಕೆ ವರ್ಗಾವಣೆಯಲ್ಲಿ ಸೂಕ್ತ ಅವಕಾಶ, ಪರಸ್ಪರ ವರ್ಗಾವಣೆ ಗೆ ಅವಕಾಶ .PST ಶಿಕ್ಷಕರಿಗೆ ಬಡ್ತಿ, ಹಳೆ ಪಿಂಚಣಿ ಯೋಜನೆ ಜಾರಿ ನಲಿ-ಕಲಿ ತರಗತಿ 1 ಹಾಗೂ 2 ತರಗತಿ ಗೆ ಮಾತ್ರ ಸೀಮಿತ ಮಾಡಬೇಕು, ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆಯನ್ನು ಶಿಕ್ಷಕಿಯರ ದಿನಾಚರಣೆಯಾಗಿಆಚರಿಸಲು ಸರ್ಕಾರದಿಂದ ಆದೇಶ ಮಾಡಿಸಲು ಮನವಿ..ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಪೂರೈಕೆ ಇನ್ನೂ ಮುಂತಾದ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.ಮಾನ್ಯ ಸಚಿವರು ಮನವಿಯನ್ನು ಸ್ವೀಕರಿಸಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.
ಶ್ರೀಮತಿ ರಾಜೇಶ್ವರಿ ಸಜ್ಜೇಶ್ವರ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಶ್ರೀಮತಿ ಅನಸೂಯಾದೇವಿ ರಾಜ್ಯ ಹಿರಿಯ ಉಪಾಧ್ಯಕ್ಷರು,ಶ್ರೀಮತಿ ಮಮತಾ ಬಂಗಾರಪೇಟ ರಾಜ್ಯಪದಾಧಿಕಾರಿಗಳು ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀಮತಿ ಡಾ.ರತ್ನಮ್ಮ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಭಾವತಿಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀಮತಿ ತೇಜೋವತಿ.ಕೆ.ಎಂ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜಯಶ್ರೀ, ಉಪಾಧ್ಯಕ್ಷರಾದ ಶ್ರೀಮತಿ ಕೆ.ಜಯಶ್ರೀ, ಶ್ರೀಮತಿ ಅನ್ನಪೂರ್ಣ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಮುನಿಯಮ್ಮ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಮಲತಾ, ಖಜಾಂಚಿ ಶ್ರೀಮತಿ ಸವಿತಾ, ದೊಡ್ಡಬಳ್ಳಾಪುರ ತಾಲೂಕಿನ ಅಧ್ಯಕ್ಷರಾದ ಶ್ರೀಮತಿ ಮಂಜುಳಾ.ಎನ್.ವಿ, ಸಂಘಟನಾ ಕಾರ್ಯದರ್ಶಿ ಶ್ರೀಮತಿ ನಂದಿನಿ, ತುಮಕೂರು ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಸಿದ್ದಮ್ಮ ಹಾಜರಾಗಿದ್ದರು 💐💐💐💐💐.