ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ.
ಉಡುಪಿ ಡಿಡಿಪಿಐ ಕಚೇರಿ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ, ಇಂದಿರಾನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಮೃತಪಟ್ಟವರು ಎಂದು ಹೇಳಲಾಗಿದೆ.
ಶಿಕ್ಷಕ ಸುದರ್ಶನ್ ಮತ್ತು ಕಾರ್ ಚಾಲಕ ಸತೀಶ್ ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳೀಯರು ಬಸ್ ನಡಿ ಸಿಲುಕಿ ನಜ್ಜುಗುಜ್ಜಾಗಿದ್ದ ಕಾರ್ ಅನ್ನು ಹೊರಗೆಳೆದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದಾವಣಗೆರೆಯ ಚೆನ್ನಗಿರಿಯಲ್ಲಿ ನಡೆದ ತನ್ನ ಸ್ನೇಹಿತನ ಮದುವೆಯನ್ನು ಮುಗಿಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಉಡುಪಿಯಿಂದ ಆಗುಂಬೆಯ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಮುಖಾಮುಖಿ ಢಿಕ್ಕಿಯಾಗಿದೆ.