ಹುಬ್ಬಳ್ಳಿಯ ಕಿಮ್ಸ್ ಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ.
ರೋಗಿಗಳ ಕ್ಷೇಮ ವಿಚಾರಣೆ, ಆಸ್ಪತ್ರೆ ಪರಿಶೀಲನೆ.
ಹುಬ್ಬಳ್ಳಿ, ಜೂನ್ 19: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು, ಇಲ್ಲಿನ ಕಿಮ್ಸ್ (ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಗೆ ಸೋಮವಾರ ದಿಢೀರ್ ಭೇಟಿ ನೀಡಿದರು.
ರೋಗಿಗಳ ಯೋಗಕ್ಷೇಮ ವಿಚಾರಿಸಿದ ಸಚಿವರು, ಸೂಕ್ತ ಚಿಕಿತ್ಸೆ ದೊರೆಯುತ್ತಿದೆಯೇ, ಏನಾದರೂ ತೊಂದರೆಗಳಿವೆಯೇ ಎಂದು ಪರಿಶೀಲನೆ ನಡೆಸಿದರು.
ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಯಾವುದಾದರೂ ತೊಂದರೆಗಳಿವೆಯೇ, ಅವರುಗಳನ್ನು ಪರಿಹರಿಸುವ ಕ್ರಮಗಳೇನು, ಬೇಕಾದ ಸೌಲಭ್ಯಗಳ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಜೊತೆಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆ ನೀಡಿದರು.
ಈ ವೇಳೆ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಮತ್ತಿತರರು ಉಪಸ್ಥಿತರಿದ್ದರು.