ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೋರಡಿಸಿದ ನ್ಯಾಯಾಲಯ
ಗದಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) 5 ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಗದಗ ಜಿಲ್ಲೆಯ ಮುಂಡರಗಿಯ ಪಟ್ಟಣದಲ್ಲಿ 2020 ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ನಿಂಗಪ್ಪ ಹಳ್ಳಿಗುಡಿ ಶಿಕ್ಷೆಗೆ ಗುರಿಯಾದ ಅಧಿಕಾರಿ. ಮುಂಡರಗಿಯಲ್ಲಿ ಬಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾಗ ಮನೆ ಭೇಟಿ ಕಾರ್ಯಕ್ರಮದ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ 29/2020 ಕಲಂ 354(ಎ) 8,10,12 ಐ.ಪಿ.ಸಿ ಕಲಂ ಪೋಕ್ಸೋ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.