ಸೌಮ್ಯ ಮೆಡಮ್ ಕೈ ತುಂಬ ಸಂಬಳವಿದ್ದರೂ ಲಂಚಕ್ಕೆ ಕೈ ಚಾಚಿ:ಲೋಕಾಯುಕ್ತರ ಬಲೆಗೆ ಬಿದ್ದರು..
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ತಹಶೀಲ್ದಾರ್
ಕೆ.ಸಿ.ಸೌಮ್ಯ ಅವರು ಲೋಕಾಯುಕ್ತ ದಾಳಿಗೊಳಗಾಗಿದ್ದು, ಲೋಕಾಯುಕ್ತ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆಕಚೇರಿಯಲ್ಲೇ ಲಂಚ ಪಡೆಯುವ ವೇಳೆ ಲೋಕಾಯುಕ್ತ ದಾಳಿಯಾಗಿದ್ದು, 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.
ವಿಎ ವರ್ಗಾವಣೆಗೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ ಸೌಮ್ಯ ಅವರು, ವಿಎ ಮರಿಸ್ವಾಮಿ ಅವರಿಂದ ಲಂಚ ಸ್ವೀಕರಿಸುವ ವೇಳೆ ಜಾಲದಲ್ಲಿ ಸಿಲುಕಿದ್ದಾರೆ.
ಈ ಬಗ್ಗೆ ಜೂನ್ 21 ರಂದು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮರಿಸ್ವಾಮಿ. ತಹಶೀಲ್ದಾರ್ ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿರುವ ಲೋಕಾಯುಕ್ತ ಪೊಲೀಸರು.
ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಇನ್ಸಪೆಕ್ಟರ್ ಬ್ಯಾಟರಾಯೀಗೌಡ, ಮೋಹನ್ ರೆಡ್ಡಿ, ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.