ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ( general transfer karnataka) ನಿಗದಿಪಡಿಸಿದ್ದ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ (Govt Employees News) ವಿಸ್ತರಿಸಿದೆ. ಈಗ ಜುಲೈ 03 ರ ವರೆಗೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬಹುದಾಗಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಈ ಹಿಂದೆ ಮೇ 30 ರಂದು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯನ್ನು ಜೂನ್ 1ರಿಂದ 15ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿತ್ತು. ನಂತರ ಜೂನ್ 16 ರಂದು ಮತ್ತೊಂದು ಆದೇಶ ಹೊರಡಿಸಿ, ಜೂನ್ 30ರವರೆಗೂ ವರ್ಗಾವಣೆ ಅವಧಿಯನ್ನು ವಿಸ್ತರಿಸಿತ್ತು. ಇನ್ನೂ ವರ್ಗಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳದೇ ಇರುವುದರಿಂದ ಸರ್ಕಾರ ಮತ್ತೆ ಮೂರು ದಿನ ವಿಸ್ತರಿಸಿ ಮತ್ತೊಂದು ಆದೇಶ ಹೊರಡಿಸಿದೆ.