ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ – ಡಾ. ರಾಮಣ್ಣವರ
ಬೈಲಹೊಂಗಲ- ಬಿಜಾಪುರ ಜಿಲ್ಲೆ ದೇವರಹಿಪ್ಪರಗಿ ಗ್ರಾಮದಲ್ಲಿ ಡಾ.ರಮೇಶ ರಾಥೋಡ ಚಾರಿಟೇಬಲ್ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ತಾಲೂಕು ಘಟಕ ದೇವರಹಿಪ್ಪರಗಿ ವತಿಯಿಂದ ದಿನಾಂಕ ೦೩.೦೭.೨೦೨೩ ರಂದು ವೈದ್ಯರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೆಬಲ್ ಟ್ರಸ್ಟಿನ ಕಾರ್ಯದರ್ಶಿ ಹಾಗೂ ಬೆಳಗಾವಿ ಕೆಎಲ್ ಇ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯದ ಶರೀರ ರಚನಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಮಹಾಂತೇಶ ರಾಮಣ್ಣವರ ಅವರ ವೈದ್ಯಕೀಯ ಕ್ಷೇತ್ರದಲ್ಲಿ ದೇಹ ದಾನದ ಹಾಗೂ ಅಂಗಾಂಗ ದಾನದ ಜಾಗೃತಿ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿಯನ್ನು ನೀಡಲಿದ್ದಾರೆ.ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.