ಈ ಸಾವಿಗೆ ಯಾರು ಹೊಣೆ?..
ಶಾಲೆಯಲ್ಲಿ ಶಿಕ್ಷಕರ ಕಿರುಕುಳ:ಶಾಲೆ ಬಿಟ್ಟ ನಂತರ ಮಗನ ಕಿರುಕುಳಕ್ಕೆ ಬೇಸತ್ತು ಆತ್ಯಹತ್ಯೆ ಮಾಡೊಕೊಂಡ ವಿದ್ಯಾರ್ಥಿನಿ..
ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಸಾರಾ (16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ.
ಸಾರಾ ಎಂಬ ವಿದ್ಯಾರ್ಥಿನಿ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು.
ಈ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕ ಖಮರ್ ಮತ್ತು ನಳಿನಿ ಶಿಕ್ಷಕರಿಂದ ನಿರಂತರ ಕಿರುಕುಳ ನೀಡಲಾಗಿತ್ತು ಎಂದು ಆರೋಪ ಕೇಳಿ ಬಂದಿದೆ. ಇವರ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ. ಈ ಘಟನೆ ಸಂಬಂಧಿಸಿ, ಹೊಸಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿಕ್ಷಕರಾಯ್ತು, ಅವರ ಮಗನಿಂದಲೂ ಕಿರುಕುಳ:
ಇನ್ನು ಶಾಲೆಯಲ್ಲಿ ಶಿಕ್ಷಕ ಖಮರ್ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರೆ, ಶಾಲೆಯಿಂದ ಹೊರಗೆ ಬಂದರೆ, ಶಿಕ್ಷಕ ಖಮರ್ ಅವರ ಮಗ ಹಮೀನ್ ಸಹ ತನನ್ನು ಪ್ರೀತಿಸು ಎಂದು ಕಿರುಕುಳ ನೀಡುತ್ತಿದ್ದನು. ನಿರಂತರವಾಗಿ ಕಿರುಕುಳ ಅನುಭವಿಸುತ್ತಿದ್ದ ಸಾರಾ ಬೇಸತ್ತು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಕುರಿತಂತೆ ಹೊಸಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಎದೆಯೆತ್ತರಕ್ಕೆ ಬೆಳೆದು ನಿಂತಿದ್ದ ಮಗಳು ಆತ್ಮಹತ್ಯೆಗೆ ಶರಣಾಗಿದ್ದ ಬಾಲಕಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.