ಶಾಲೆಗೆ ಹೋರಟಿದ್ದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವು…
ಬೆಂಗಳೂರು: ಚಲಿಸುತ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ, ವಾಹನ ಸವಾರಿ ಮಾಡುತ್ತಿದ್ದ ಶಿಕ್ಷಕಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ವೇದವತಿ ( 35 ) ಮೃತ ಶಿಕ್ಷಕಿಯಾಗಿದ್ದಾರೆ. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ವಾಗಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವೇದವತಿ ಶಾಲೆಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಅವಘಡ ಅಂಭವಿಸಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.