ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ..
ಮುಂದಿನ ಹತ್ತು ದಿನಗಳಲ್ಲಿ ನಿರಂತರವಾಗಿ ಮಳೆ ಸುರಿಯಲಿದೆ: ಹವಾಮಾನ ಇಲಾಖೆ..
ಯಾವ ಜಿಲ್ಲೆ ರೆಡ್ ಅಲರ್ಟ್, ಯಾವ ಜಿಲ್ಲೆ ಯೆಲ್ಲೂ ಅಲರ್ಟ್ ಇಲ್ಲಿದೆ ನೋಡಿ ಮಾಹಿತಿ..
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಜು.06. ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು. 07) ದ.ಕ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆ ಹಿನ್ನೆಲೆ ಜಾಗರ, , ಆವತಿ, ವಸ್ತಾರೆ, ಖಾಂಡ್ಯ, ಆಲ್ದೂರು ಹೋಬಳಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಚಿತ್ರದುರ್ಗಗಳಲ್ಲಿ ಆರೆಂಜ್ ಅಲರ್ಟ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಹವಾಮಾನ ಇಲಾಖೆ ನಿರ್ದೇಶಕರಾದ ಗೀತಾ ಅಗ್ನಿಹೋತ್ರಿ ಆಕಾಶವಾಣಿಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಪ್ರಾಂತ್ಯದಲ್ಲಿ ನೈಋತ್ಯ ಮುಂಗಾರು ಹೆಚ್ಚಾಗಿದೆ. ಮುಂದಿನ 10 ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.