ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.
ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಇಂದು ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇಂದು ಮಂಡಿಸಿದಂತ ಬಜೆಯ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು.
ಜೂನ್ 18ರಿಂದ ಗೃಹ ಜ್ಯೋತಿಗೆ ಅರ್ಜಿ ಸಲ್ಲಿಕೆ ಆರಂಭಿಸಲಾಗಿದೆ. ಕೋಟಿಗೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯ ಅಡಿಯಲ್ಲಿ 13.65 ಕೋಟಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.
ಜುಲೈ.16ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತದೆ. ಆಗಸ್ಟ್ ತಿಂಗಳಿನಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ರೂ.2000 ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದರು.