ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರಕಾರ..
ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಸರಕಾರ….
ದತ್ತು ಪಡೆದ ಮಕ್ಕಳಿಗೂ ಈ ಯೋಜನೆ ಲಾಭ ಪಡೆದುಕೊಳ್ಳಬಹುದು…
ಕೂಡಲೇ ಸರಕಾರದ ಈ ಆದೇಶವನ್ನು ಪಾಲನೆ ಮಾಡಿ..
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ
ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼಯ (ಕೆಎಎಸ್ಎಸ್) ಲಾಭ ಸದ್ಯವೇ ನೌಕರರಿಗೆ ಲಭ್ಯವಾಗಲಿದೆ.
ಈ ಯೋಜನೆಯ ಲಾಭ ಪಡೆಯಲು ಸರ್ಕಾರಿ ನೌಕರರು ʻಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯʼ (HRMS) ವೆಬ್ಸೈಟ್ನಲ್ಲಿ ಮಾಹಿತಿಯನ್ನು ಅಪ್ಡೇಟ್ ಮಾಡಿಸಬೇಕೆಂದು ಎಲ್ಲ ಸರ್ಕಾರಿ ನೌಕರರಿಗೆ ಸರ್ಕಾರ ಸೂಚಿಸಿದೆ. ನೌಕರರು ತಮ್ಮ ಮತ್ತು ಅವಲಂಬಿತರ ಮಾಹಿತಿಯನ್ನು HRMS ನಲ್ಲಿ ಅಪಡೇಟ್ ಮಾಡಬೇಕಿರುತ್ತದೆ. ಅಲ್ಲದೆ ಈ ಮಾಹಿತಿಯನ್ನು ಕಚೇರಿಗೆ ಸಹ ಸಲ್ಲಿಸಬೇಸಬೇಕಿರುತ್ತದೆ ಎಂದು ನೌಕರರಿಗೆ ತಿಳಿಸಲಾಗಿದೆ.
ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯ ನ್ನೊಳಗೊಂಡಂತೆ (ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ), ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ವೈದ್ಯಕೀಯ ಸೇವೆ ಪಡೆಯಲು ಅರ್ಹರಾಗಿರುತ್ತಾರೆ.
ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಾರಿಗೆ ತರುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಒಳಪಟ್ಟಿದ್ದು, ಈ ಟ್ರಸ್ಟ್ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ನಿರ್ವಹಿಸುತ್ತಿದೆ. ಸರ್ಕಾರಿ ನೌಕರರಿಗೆ ರೂಪಿಸಲಾಗಿರುವ ಈ ಯೋಜನೆ ಕೂಡ ಇದರ ಅಡಿಯಲ್ಲಿಯೇ ಬರಲಿದೆ.