ಶಿಕ್ಷಕರು ರಿಯಲ್ ಎಸ್ಟೆಟ್ ದಂಧೆ ನಡೆಸುತ್ತಿದ್ದಾರೆಯೇ? ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಂದ ಇಲಾಖೆ ಅಧಿಕಾರಿಗಳ ಹಾಗೂ ಶಿಕ್ಷಕರ ಮೇಲೆ ಶಿಸ್ತು ಕ್ರಮ ಗ್ಯಾರೆಂಟಿ!!
ಸಾಗರ: ಕೆಲವೆಡೆ ಶಿಕ್ಷಕರು ತಮ್ಮ ಕರ್ತವ್ಯವನ್ನು ಮರೆತು
ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವ ಬಗ್ಗೆ ದೂರುಗಳಿವೆ. ಇಂತಹ ಶಿಕ್ಷಕರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪೌಢಶಾಲೆಗಳ ಬಿಆರ್ಸಿ, ಸಿಆರ್ಪಿ ಹುದ್ದೆಯಲ್ಲಿರುವವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇದನ್ನು ಸರಿಪಡಿಸದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಎಂದು ಅವರು ಎಚ್ಚರಿಸಿದರು.
ಸರ್ಕಾರಿ ಶಾಲೆಯ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ಸ್ಥಳಾಂತರದ ಕುರಿತು ಕೂಡಲೆ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು, ಶಾಲೆಗಳಲ್ಲಿನ ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ಧೋರಣೆ ತಾಳಬಾರದು ಎಂದರು.