2022_2023ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಅಂತಿಮ ಮುದ್ರೆ ಒತ್ತಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ವಿ ಕಾವೇರಿ..
ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ಅಂತರವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಜು.26ರಿಂದ ಆ.11ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ. 4,022 ಪಾಥಮಿಕ ಶಾಲಾ ಶಿಕ್ಷಕರು, 964 ಪ್ರೌಢಶಾಲಾ ಶಿಕ್ಷಕರು, 267 ಮುಖ್ಯ ಶಿಕ್ಷಕರು ಮತ್ತು ತತ್ಸಮಾನ ವೃಂದದ ಶಿಕ್ಷಕರು ಸೇರಿ 5,253 ಶಿಕ್ಷಕರು ವರ್ಗಾವಣೆಗೆ ಅರ್ಹರಾಗಿರುತ್ತಾರೆ.
ಪ್ರತಿದಿನ 300 ರಿಂದ 400 ಮಂದಿಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಇದು ರಾಜ್ಯಮಟ್ಟದ ಕೌನ್ಸೆಲಿಂಗ್ ಆಗಿದ್ದು, ಶಿಕ್ಷಕರ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳಲ್ಲಿಯೇ ಕೌನ್ಸೆಲಿಂಗ್ ನಡೆಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವೇಳಾಪಟ್ಟಿಯಂತೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಆಯಕ್ತರಾದ ಬಿ.ಬಿ. ಕಾವೇರಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ತಾಲ್ಲೂಕು, ಜಿಲ್ಲೆ ಮತ್ತು ವಿಭಾಗೀಯ ವರ್ಗಾವಣೆ ಪ್ರಕ್ರಿಯೆಗಳು ನಡೆದಿವೆ. ಸರ್ಕಾರಿ ಶಾಲೆಗಳ ಶಿಕ್ಷಕರ ಕೊರತ ನೀಗಿಸಲು ದಾಖಲೆ ರೀತಿಯಲ್ಲಿ 25,000 ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆದಿದೆ.ಜುಲೈ 31ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ವರ್ಗಾಯಿತ ಶಿಕ್ಷಕರು ನಿಗದಿತ ಶಾಲೆಗಳಿಗೆ ತಲುಪುವವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಶಿಕ್ಷಕರ ನೇಮಕಕ್ಕೆ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ
ಮಧು ಬಂಗಾರಪ್ಪ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ…