ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ…
ಧಾರವಾಡ/ಬೆಳಗಾವಿ/ ಕೊಡಗು/: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಕೆಲ ಭಾಗಗಳಲ್ಲಿ ಮುಂಗಾರು ಮಳೆ ( Monsoon Rain ) ಆರ್ಭಟಿಸುತ್ತಿದೆ. ನಾಳೆ ಕೂಡ ಮಳೆ ಮುಂದುವರೆಯುವ ಕಾರಣದಿಂದಾಗಿ ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ( School and College ) ರಜೆಯನ್ನು ಘೋಷಣೆ ಮಾಡಲಾಗಿದೆ.
ನಾಳೆ ಸರಕಾರಿ/ಅನುದಾನಿತ ಅಂಗನವಾಡಿ, ಪ್ರಾಥಮಿಕ,ಪ್ರೌಢಶಾಲೆ, ಕಾಲೇಜಗಳಿಗೆ ಒಂದು ದಿನ ರಜೆಯನ್ನು ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಘೋಷಣೆ ಮಾಡಿದ್ದಾರೆ..
ನಾಳೆ ಹಾವೇರಿ ಜಿಲ್ಲೆಯಲ್ಲಿನ ಶಾಲೆಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ…
ನಾಳೆ ಮಡಿಕೇರಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ ಜಿಲ್ಲೆಯಲ್ಲಿ ಸತತ ಕೆಲದ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಾಧ್ಯಂತ ಮಳೆರಾಯ ಆರ್ಭಟಿಸಿದ್ದಾನೆ. ಮಹಾ ಮಳೆ ಜಿಲ್ಲೆಯ ಜನರು ಬೆಚ್ಚಿಬಿದ್ದಾರೆ. ಭಾರೀ ಮಳೆ ಮುಂದುವರಿದ ಹಿನ್ನಲೆಯಲ್ಲಿ ನಾಳೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಲ್ಲಿ ಮಳೆ ಮುಂದುವರೆಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ನಾಳೆ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯೂ ಮಳೆ ಆರ್ಭಟಿಸುತ್ತಿದ್ದು ( Heavy Rain ), ಮನೆಯಿಂದ ಹೊರ ಬಾರದಂತೆ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಹೀಗಾಗಿ ಮಕ್ಕಳ ಸುರಕ್ಷತೆಯ ಕಾರಣದಿಂದ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ( School and College Holiday ) ನೀಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.
ನಾಳೆ ಬೆಳಗಾವಿಯ ಈ ತಾಲೂಕುಗಳ ಶಾಲೆಗಳಿಗೆ ರಜೆ
ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಬೆಳಗಾವಿ ನಗರ ಮತ್ತು ಗ್ರಾಮಾಂತರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಕಾರಣ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರದ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ನಾಳೆ ‘ಶಿವಮೊಗ್ಗ ಜಿಲ್ಲೆ’ಯ ‘ಎಲ್ಲಾ ಶಾಲೆ’ಗಳಿಗೆ ರಜೆ ಘೋಷಣೆ
ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ( School Education Department ) ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಅವರ ಸೂಚನೆ ಮೇರೆಗೆ ದಿನಾಂಕ:24/07/2023ರ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಬೈಂದೂರು ತಾಲೂಕಿನ ಶಾಲೆಗಳು, ಪಿಯುಸಿ ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ, ಹಾಸನ ತಾಲೂಕು, ಸಕಲೇಶಪುರ, ಬೇಲೂರು ಹಾಗೂ ಅರಕಲಗೂಡು ಶಾಲೆಗಳಿಗೆ ರಜೆಯನ್ನು ನಾಳೆ ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶಿಸಿದ್ದಾರೆ.
ನಾಳೆ ಹಾಸನ ತಾಲೂಕು, ಆಲೂರು, ಸಕಲೇಶಪುರ, ಬೇಲೂರು ಹಾಗೂ ಅರಕಲಗೂಡಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.