ನಾಳೆಯೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 25ರಂದು (ಮಂಗಳವಾರ) ಪದವಿ ಪೂರ್ವ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಸುಳ್ಯದಲ್ಲೂ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ಕಾಲೇಜುಗಳ ವರೆಗೆ) ಮಂಗಳವಾರ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ಶಾಲೆಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ…