ಕಲಘಟಗಿ :ಬೇಗೂರು ಗ್ರಾಮ ಪಂಚಾಯತ ವ್ಯಾಪ್ತಿಯ ಬೇಗೂರು ಗ್ರಾಮದಲ್ಲಿ ಮಾನ್ಯ ಕಾರ್ಮಿಕ ಸಚಿವರು ಧಾರವಾಡ ಜಿಲ್ಲಾ ಉತ್ಸವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಿ ಗ್ರಾಮಕ್ಕೆ ಎಲ್ಲಾ ಮೂಲಭೂತ ಸೌಕರ್ಯ ಸಮರ್ಥವಾಗಿ ದೊರಕಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳದಲ್ಲಿ ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳಿಂದ ಪರಿಹಾರ ದೊರಕಿಸಿ ಕೊಟ್ಟು ತದನಂತರ ಎಲ್ಲಾ ಪಕ್ಷಗಳ ಮುಖಂಡರು ಕಲಘಟಗಿ ಕ್ಷೆತ್ರದ ಅಭಿರುದ್ದಿಗಾಗಿ ಒಮ್ಮನಸಿನಿಂದ ದುಡಿಯಲು ಮುಂದಾಗಬೇಕೆಂದರು. ಗ್ರಾಮ ಪಂಚಾಯತ ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ಸ್ಪಂದನೆ ಮಾಡಿ ಗ್ರಾಮ ಮಟ್ಟದ ಕೆಲಸ ವಿಳಂಬವಿಲ್ಲದೆ ನಿರ್ವಹಣೆ ಮಾಡುವಂತೆ ಸೂಚನೆ ಮಾಡಿದರು ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಎಲ್ಲಾ ಪಕ್ಷಗಳ ಮುಖಂಡರು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನರು ಉಪಸ್ಥಿತರಿದ್ದರು