ಶಿಕ್ಷಕರಿಗೆ ಗುಡ್ ನ್ಯೂಸ್…
ಶೀಘ್ರವೇ ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!
ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಿತೇಶ್ ಕುಮಾರ್ ಸಿಂಗ್ (IAS) ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಭೇಟಿ ಮಾಡಲಾಯಿತು.
1) ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಬಿ.ಎಲ್.ಓ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ವಿನಂತಿಸಲಾಯಿತು. ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಆಯುಕ್ತರಿಗೆ ಆದೇಶವನ್ನು ಹೊರಡಿಸಲು ನಿರ್ದೇಶನವನ್ನು ನೀಡಲಾಗಿದ್ದು ಬಿ.ಎಲ್.ಓ ಕೆಲಸದಿಂದ ಶಿಕ್ಷಕರನ್ನು ಮುಕ್ತಗೊಳಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
2) ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಕ್ಷಣ ಸಚಿವ ಸಂಪುಟಕ್ಕೆ ಮಂಡಿಸಲು ವಿನಂತಿಸಲಾಯಿತು. ಮಾನ್ಯ ಸಚಿವರೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದರು. 3) ವರ್ಗಾವಣಾ ಪ್ರಕ್ರಿಯೆಗಳು ಮುಗಿದ ತಕ್ಷಣ ಮುಖ್ಯ ಗುರುಗಳಿಗೆ ಮತ್ತು ಹಿರಿಯ ಮುಖ್ಯ ಗುರುಗಳಿಗೆ ಬಡ್ತಿ ಕೊಡಲು ವಿನಂತಿಸಲಾಯಿತು.
ಈ ಸಂದರ್ಭದಲ್ಲಿ
ಚಂದ್ರಶೇಖರ ನುಗ್ಗ ರಾಜ್ಯ ಪ್ರಧಾನ ಕಾರ್ಯದರ್ಶಿಗಳು
ಕೆ ನಾಗೇಶ ರಾಜ್ಯಾಧ್ಯಕ್ಷರು..
ವಿಜಯನಗರ ಜಿಲ್ಲಾಧ್ಯಕ್ಷರಾದ ಬಸವರಾಜ ಸಂಗಪ್ಪನವರ, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸಿದ್ರಾಮ ಲೋಕನ್ನವರ ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಾದ ಡಿ ಚಿ ಕಲಾರಕೊಪ್ಪ ಅವರು ಉಪಸ್ಥಿತರಿದ್ದರು.