ಬೆಂಗಳೂರು:
ಹೆಚ್ಚಿನ ಮಳೆ ಆಗುತ್ತಿರುವ ಕಾರಣ ಜುಲೈ27 ಹಾಗೂ28 ರಂದು ಹಾಸನ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ..
ಈ ರಜೆಯ ದಿನಗಳನ್ನು ಶನಿವಾರ ಹಾಗೂ ಭಾನುವಾರ ಪೂರೈಸುವ ಮೂಲಕ ಸರಿದೂಗಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ..
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ ಜುಲೈ 27 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ..ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳಿಗೆ ರಜೆ ಇಲ್ಲ..
ಉಡುಪಿ ಜಿಲ್ಲೆಯಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ..
ಚಿತ್ರದುರ್ಗ ಜಿಲ್ಲೆಯಲ್ಲಿ 27 ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ..
ಧಾರವಾಡ ಜಿಲ್ಲೆಯಲ್ಲಿ ನಾಳೆ ಜು. 27 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ…
ಧಾರವಾಡ ಜು.26: ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 27 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 12 ರ ಶನಿವಾರದಂದು ಪೂರ್ಣ ದಿನ ಶಾಲೆ, ಕಾಲೇಜು ನಡೆಸುವ ಮೂಲಕ ಜುಲೈ 27 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜುಗಳಿಗೆ ಸಂಭಂದಿಸಿದ ಅಧಿಕಾರಿಗಳು ತಮಗೆ ಸಂಬಂಧಿಸಿದ ಸಂಸ್ಥೆಗಳಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.