ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದ ಸಚಿವ ಸಂತೋಷ ಲಾಡ್..
ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ ಶಾಲೆಗೆ ತೆರಳಲು ಶಾಲಾ ಮಕ್ಕಳಿಗೆ ತೊಂದರೆ…
ಮಕ್ಕಳಿಗೆ ಸೆಲ್ಯೂಟ್ ಹೊಡೆದ ಸಚಿವ ಸಂತೋಷ ಲಾಡ್..
ಧಾರವಾಡ:
ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕುಂದಗೋಳ ತಾಲೂಕಿನ ಮಳೆ ಹಾನಿಗೊಳಗಾದ ಮತ್ತು ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶರೇವಾಡದಲ್ಲಿ ಶಾಲಾ ಮಕ್ಕಳನ್ನು ಭೇಟಿ ಮಾಡಿದರು.
ಕುಂದಗೋಳದಿಂದ ಬರುವ ಬಸ್ ಗಳು ತುಂಬಿಕೊಂಡು ಬರುತ್ತವೆ. ಬೆಳಿಗ್ಗೆ ಮತ್ತು ಸಂಜೆ ಶಾಲೆಗೆ ತೆರಳಲು ಹಾಗೂ ಮರಳಿ ಬರಲು ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು ಎಂದು ಶಾಸಕರಾದ ಎಂ.ಆರ್.ಪಾಟೀಲ ಮತ್ತು ಶಾಲಾ ಮಕ್ಕಳು ಸಚಿವರಲ್ಲಿ ಮನವಿ ಮಾಡಿಕೊಂಡರು.
ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಿದ್ದಾರೆ ಎಂದು ಭರವಸೆ ನೀಡಿದರು.