ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ.
ನವದೆಹಲಿ: ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ. ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.
2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ, ಕೆಲವು ಶಾಲೆಗಳು ಇನ್ನೂ ಪ್ರವೇಶಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನೆಲೆ ಈ ಸ್ಪಷ್ಟನೆ ನೀಡಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಶಿಕ್ಷಣವು ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿದೆ ಮತ್ತು ಹೆಚ್ಚಿನ ಶಾಲೆಗಳು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ವ್ಯಾಪ್ತಿಗೆ ಬರುತ್ತವೆ. ಆದರೆ 05.09.2018 ರ ಸುತ್ತೋಲೆಯ ಪ್ರಕಾರ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕಾಗಿ ಮಕ್ಕಳಿಗೆ ಪ್ರವೇಶ ನಿರಾಕರಿಸಬಾರದು ಎಂದು ಹೇಳಿದರು.