ಬೆಂಗಳೂರು: ಮತಗಟ್ಟೆ ಅಧಿಕಾರಿಗಳ ಹುದ್ದೆಗೆ ಶಿಕ್ಷಕರನ್ನು ನಿಯೋಜನೆ ಮಾಡುವ ಬಗ್ಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಅದು ಏನು ಅಂತ ಮುಂದೆ ಓದಿ.
ಈ ಕುರಿತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚನಾವಣಾಧಿಕಾರಿ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತರಿಗೆ, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಕಾರ್ಯಗಳಿಗೆ ( Election Duty ) ಭಾರತ ಚುನಾವಣಾ ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ಕೈಪಿಡಿ, ಅಕ್ಟೋಬರ್, 2016 ರ ಅಧ್ಯಾಯ 5ರ ಪ್ಯಾರಾ 5.2 ರಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ನಿಯೋಜನೆಗೆ 13 ವಿವಿಧ ಹುದ್ದೆಗಳ ವಿವರ ನೀಡಲಾಗಿರುತ್ತದೆ. ಅದರಲ್ಲಿ ಶಿಕ್ಷಕರ ಹುದ್ದೆಯೂ ಒಂದಾಗಿರುತ್ತದೆ. ಸರ್ವೋಚ್ಚ ನ್ಯಾಯಾಲಯದ ಅಪೀಲ್ (ಸಿವಿಲ್) 5659/2007 ರಲ್ಲಿ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜಿಸುವ ಬಗ್ಗೆ ಆದೇಶದಲ್ಲಿ ಈ ಕೆಳಕಂಡಂತೆ ಉಲ್ಲೇಖಿಸಲಾಗಿರುತ್ತದೆ ಎಂದಿದ್ದಾರೆ.
We would, however notice that the Election Commission before us also categorically stated that as far as possible teachers would be put on electoral roll revision works on holidays, non-teaching days and non-teaching hours- whereas non teaching staff be put on duty any time. We therefore, direct that all teaching staff shall be put on the duties of electoral rolls revision and election works on holidays and non-teaching days. Teachers should not ordinarily be put on duty on teaching days and within teaching hours. Non- teaching staff, however, may be put on such duties on any days, any time, if permissible in law.
ಮೇಲ್ಕಂಡ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಈ ಕೆಳಕಂಡಂತೆ ಕ್ರಮವಹಿಸುವುದು
1. ಯಾವುದೇ ಶಾಲೆಯಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಎಲ್ಲಾ ಶಿಕ್ಷಕರನ್ನು ನಿಯೋಜಿಸಬಾರದು.
2. ಶಿಕ್ಷಕರನ್ನು ನಿಯೋಜಿಸುವಾಗ ರಜಾ ದಿನಗಳಲ್ಲಿ ಹಾಗೂ ಬೋಧನಾ ಸಮಯವನ್ನು ಹೊರತುಪಡಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವುದು.
3. Terminal illness ಹೊಂದಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
4. ಮುಂದಿನ 6 ತಿಂಗಳ ಅವಧಿಯಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ( Teacher Election Duty ) ನಿಯೋಜಿಸುವಾಗ ಮೇಲ್ಕಂಡ ಅಂಶಗಳನ್ನು ಹಾಗೂ ಕಾಲಕ ನೀಡುವ ಭಾರತ ಚುನಾವಣಾ ಆಯೋಗದ ಸುತ್ತೋಲೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲು ಮಾರ್ಗಸೂಚಿಗಳನ್ವಯ ನಿರ್ದೇಶಿಸಲ್ಪಟ್ಟಿದ್ದಾರೆ.