ಇಂಥಹ ಶಿಕ್ಷಕನನ್ನು ಏನ ಮಾಡಬೇಕು ಅಂತ ನೀವೆ ಹೇಳಿ…
ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿ ಸದ್ಯ ಪೋಲಿಸರ್ ಅತಿಥಿಯಾಗಿದ್ದಾನೆ..
ಕೋಲಾರ : ಶಿಕ್ಷಕನಾಗಿ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ತನ್ನ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿರುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶಿಕ್ಷಕ ಶಿವಕುಮಾರ್ (33) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಸಂತ್ರಸ್ತೆಯು ಈತ ಬೋಧಿಸುತ್ತಿದ್ದ ಶಾಲೆಯಲ್ಲೇ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಈಗ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚಿಗಷ್ಟೇ ಶಿಕ್ಷಕನ ಕೃತ್ಯ ಬಯಲಾಗಿದೆ. ಬಳಿಕ ಪೋಷಕರು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಶಿಕ್ಷಕನ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.