ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ಕಡ್ಡಾಯ..ಹೈಕೊರ್ಟನಿಂದ ಮಹತ್ವದ ಆದೇಶ..
ಬೆಂಗಳೂರು: ರಾಜ್ಯ ಸರ್ಕಾರದಿಂದ 1ನೇ ತರಗತಿ ದಾಖಲಾತಿಗೆ 2025-26ನೇ ಸಾಲಿನಿಂದ 5 ವರ್ಷ 5 ತಿಂಗಳಿನಿಂದ 6 ವರ್ಷಕ್ಕೆ ಹೆಚ್ಚಳ ಮಾಡಲಾಗಿತ್ತು. ಈ ಆದೇಶಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಹೌದು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿ ಪ್ರವೇಶ ಪಡೆಯಲು 5 ವರ್ಷ 5 ತಿಂಗಳು ಬದಲು ಮಗುವಿಗೆ6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ 2022ರಲ್ಲಿ ಹೊರಡಿಸಿದ್ದಂತ ಅಧಿಸೂಚನೆಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು ಜುಲೈ.26, 2022ರಂದು ಆದೇಶ ಹೊರಡಿಸಿದ್ದನ್ನು ರದ್ದುಕೋರಿ ಬೆಂಗಳೂರಿನ ಅನಿಕೇತ್ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರು, ಅರ್ಜಿಯನ್ನು ವಜಾಗೊಳಿಸಿ, 6ನೇ ವಯಸ್ಸಿಗೆ 1ನೇ ತರಗತಿ ದಾಖಲಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಅಂದಹಾಗೇ ಹೈಕೋರ್ಟ್ ಅರ್ಜಿದಾರರ ಈ ವಾದ ಒಪ್ಪಲಾಗದು. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತವಾಗಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ( NEP)-2020ರಲ್ಲಿ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂತ ಸರಿಯಾಗಿ ಮಾರ್ಪಾಡು ಮಾಡಲಾಗಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
ಜಾಗತಿಕ ಶೈಕ್ಷಣಿ ಮಾರ್ಗಸೂಚಿ ಆದರಿಸಿ ಶಾಲಾ ಪ್ರವೇಶಾತಿ ವಯಸ್ಸನ್ನು ಎನ್ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಅಲ್ಲದೇ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಎನ್ಇಪಿ ಮಾರ್ಗಸೂಚಿಗಳನ್ನು ಪಾಲಿಸಬೇಕು. ರಾಜ್ಯ ಸರ್ಕಾರ ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಎನ್ಇಪಿಗೆ ಅನುಗುಣವಾಗಿದೆ. ಆದ್ದರಿಂದ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂಬುದಾಗಿ ಹೈಕೋರ್ಟ್ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದೆ.