ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಚಿವ ಸಂಪುಟ ಸಭೆ ನಿರ್ಧಾರ…
ಬೆಂಗಳೂರು: ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ‘ಲೋಕಾಯುಕ್ತ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ. ಎಚ್. ನಾಗೇಶ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲು ಅನುಮೋದನೆ ನೀಡಲಾಗಿದೆ’ ತಿಳಿಸಿದ್ದಾರೆ.
ಲೋಕಾಯುಕ್ತರ ಬಲೆಗೆ ಬಿದ್ದಿದ್ದ ರಾಮನಗರ ಜಿಲ್ಲಾಸ್ಪತ್ರೆ
ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂಡಲಗಿ ಹಾಗೂ
ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ
ನಾಗಮಣಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲು ಸಂಪುಟ
ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎಂದು ಸಚಿವರು
ಹೇಳಿದ್ದಾರೆ.
ಪೋಕ್ಸ್ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.