ಧ್ವಜ ಹಾರಿಸದ ಶಿಕ್ಷಕಿ ಅಮಾನತ್ ಮಾಡಿ ಆದೇಶ ಮಾಡಿದ್ರು ಕ್ಷೇತ್ರ ಶಿಕ್ಷಣಾಧಿಕಾರಿ….
ಶಿಕಾರಿಪುರ: ತಾಲೂಕಿನ ಎಳನೀರುಕೊಪ್ಪ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸದ ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಅಮಾನತು ಮಾಡಿದ್ದಾರೆ. ಸ್ವಾತಂತ್ರೋತ್ಸವ ದಿನದಂದು ಶಾಲೆಯಲ್ಲಿ ಧ್ವಜಾರೋಹಣ ನಡೆಸದಿರುವ ಬಗ್ಗೆ ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು. ಧ್ವಜಕಟ್ಟೆ ಸರಿ ಇಲ್ಲದೇ ಇರುವುದರಿಂದ ಧ್ವಜಾರೋಹಣ ನಡೆಸಲು ಸಾಧ್ಯವಾಗಿಲ್ಲ ಎಂದು ಮುಖ್ಯ ಶಿಕ್ಷಕಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಿದ್ದರು. ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಧ್ವಜಕಟ್ಟೆ ಸುಸ್ಥಿತಿಯಲ್ಲಿರುವುದು ಕಂಡುಬಂದಿದೆ. ಹೀಗಿದ್ದರೂ ಧ್ವಜಾರೋಹಣ ನಡೆಸದೇ ಕರ್ತವ್ಯ ಲೋಪ ಎಸಗಿದ್ದಾರೆ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.