ಮಂಡ್ಯ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಗೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು..
ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ , ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವುದು ನಮ್ಮ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇಂದು ಈ ಯೋಜನೆಯನ್ನು ರಾಜ್ಯದಾದ್ಯಂತ ಅನುಷ್ಠಾನ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ..
ಈ ಯೋಜನೆಯನ್ನು ಉದ್ಘಾಟನೆ ಮಾಡಿ ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದಿದ್ದಾರೆ.
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ಗಾಣಿಗ ರವಿ, ಎಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಬಿ ಬಿ ಕಾವೇರಿ ಮತ್ತಿತರರು ಉಪಸ್ಥಿತರಿದ್ದರು
ಮಕ್ಕಳಿಗೆ ಸ್ವತಃ ಸಚಿವರೆ ಮೊಟ್ಟೆ ತಿನ್ನಿಸುವ ಮೂಲಕ ಪೂರಕ ಪೌಷ್ಟಿಕ ಆಹಾರದ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು..