ಶಿಕ್ಷಕಿ ಜ್ಯೋತಿ ಅವರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಕ್ಷೇತ್ರ ಶಿಕ್ಷಣಾಧಿಕಾರಿಗಳು..
ಉಡುಪಿ, ಆ.31: ಕಾರ್ಕಳ ತಾಲೂಕು ಎಣ್ಣೆಹೊಳೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಿ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜ್ಯೋತಿ ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಅವರ ಮೇಲೆ ದಾಖಲಾದ ದೂರಿಗೆ ಸಂಬಂಧಿಸಿದಂತೆ, ಇಲಾಖಾ ವಿಚಾರಣಾ ವರದಿಯನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.