ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ:
ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ.
ಉಲ್ಲೇಖಿತ (4) ರ ಆದೇಶದಲ್ಲಿ, ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆ ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಕನ್ನಡ ಮತ್ತು ಆಂಗ್ಲ ಭಾಷೆಯ ಆವೃತ್ತಿಯನ್ನು ಬಳಸಿಕೊಳ್ಳುವ ಸಂಬಂಧ ಪೀಠಿಕೆ ಮಾದರಿಯನ್ನು ನೀಡಲಾಗಿದೆ.
ಉಲ್ಲೇಖಿತ (2) ರ ಈ ಕಛೇರಿಯ ಸುತ್ತೋಲೆಯಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಓದುವ ಕುರಿತು ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ಅಂತರ ರಾಷ್ಟ್ರೀಯ ಪುಜಾಪುಭುತ್ವ ದಿನಾಚರಣೆ ಅಂಗವಾಗಿ ದಿನಾಂಕ:15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದ ವಿಶಾಲವಾದ ಮೆಟ್ಟಿಲುಗಳು ಮತ್ತು ಪ್ರದೇಶದಲ್ಲಿ 10,000 ವಿದ್ಯಾರ್ಥಿಗಳೊಡನೆ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ ಅಂತ ತಿಳಿಸಿದೆ.