ಸರಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ.!!
ಸರಕಾರದ ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಎನ್ನುವಂತೆ ಸರ್ಕಾರಿ ನೌಕರರ ವಿರುದ್ಧದ ಶಿಸ್ತು ಕ್ರಮ ಜರುಗಿಸುವಲ್ಲಿ ಆಗುವ ವಿಳಂಬ ತಪ್ಪಿಸಲು ಮಾರ್ಗಸೂಚಿ ಕ್ರಮಗಳನ್ನು ಸರ್ಕಾರ ಪ್ರಕಟಿಸಿದೆ.
ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆಯು ನೀಡಿರುವ ತನಿಖಾ ವರದಿಯನ್ನು ಪರಿಶೀಲಿಸಿದ ನಂತ್ರ, ಇಲಾಖಾ ವಿಚಾರಣೆಯನ್ನು ಲೋಕಾಯುಕ್ತ ಸಂಸ್ಥೆಗೆ ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದಂತ ಕ್ರಮಗಳನ್ನು ಪ್ರಕಟಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ಹಾಗೂ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಸರ್ಕಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಆಯುಕ್ತರು, ಪಂಚಾಯತ್ ರಾಜ್, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆಯ ಲೆಕ್ಕ ಸಹಾಯಕ ವೃಂದಕ್ಕೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ (ಅಭಿವೃದ್ಧಿ) ರವರನ್ನು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವಾಗಿದ್ದು, ಲಘು ಮತ್ತು ಕಠಿಣ ದಂಡನೆಗಳನ್ನು ವಿಧಿಸಲು ಸಕ್ಷಮ ಪ್ರಾಧಿಕಾರ ನಿರ್ದಿಷ್ಟಪಡಿಸಲಾಗಿದೆ ಎಂದಿದ್ದಾರೆ.
ಉಲ್ಲೇಖ(1) ರ ಸರ್ಕಾರದ ಅಧಿಕೃತ ಜ್ಞಾಪನದಲ್ಲಿ ಸರ್ಕಾರಿ ನೌಕರನ ಮೇಲಿನ ಆಪಾದಿತ ದುರ್ನಡತೆಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 11 ರಡಿ ಶಿಸ್ತಿನ ಕ್ರಮ ಪ್ರಾರಂಭಿಸಿ ಮುಕ್ತಾಯಗೊಳಿಸಲು ಒಟ್ಟು 9 ತಿಂಗಳ ಕಾಲಮಿತಿಯನ್ನು ನಿಗಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಉಲ್ಲೇಖ (2) ರ ಸರ್ಕಾರದ ಸುತ್ತೋಲೆಯಲ್ಲಿ ಸರ್ಕಾರಿ ನೌಕರನ ಮೇಲಿನ ಆಪಾದಿತ ದುರ್ನಡತೆಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 12 ರಡಿ ಶಿಸ್ತಿನ ಕ್ರಮ ಪ್ರಾರಂಭಿಸಿ ಮುಕ್ತಾಯಗೊಳಿಸಲು ಒಟ್ಟು 45 ದಿನಗಳ ಕಾಲಮಿತಿಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಿ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸದಿರುವುದರಿಂದ ನೌಕರರಿಗೆ ಸಿಗಬೇಕಾದ ಮುಂಬಡ್ತಿ, ಕಾಲಮಿತಿ ವೇತನ ಬಡ್ತಿ, ವೇತನ ಬಾಕಿ ಮುಂತಾದ ಸೇವಾ ಸೌಲಭ್ಯಗಳಿಂದ ವಂಚಿತರಾಗಿದ್ದು, ಇಲಾಖಾ ವಿಚಾರಣೆಗಳನ್ನು ಪೂರ್ಣಗೊಳಿಸಲು 9 ತಿಂಗಳುಗಳ ಕಾಲಮಿತಿ ನಿಗಧಿಪಡಿಸಿರುವುದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೂ ಸಹ ಎಲ್ಲಾ ಇಲಾಖಾ ವಿಚಾರಣೆಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದವರು ಸರ್ಕಾರದ ಗಮನಕ್ಕೆ ತಂದಿರುತ್ತಾರೆ ಎಂದು ಹೇಳಿದ್ದಾರೆ.
ಉಲ್ಲೇಖ (3) ರ ಸರ್ಕಾರದ ಸುತ್ತೋಲೆಯಲ್ಲಿ ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆಯು ಕರ್ನಾಟಕ ಲೋಕಾಯುಕ್ತ ಕಾಯ 1984 ರ ಕಲಂ 12(3) ರಡಿಯಲ್ಲಿ ಸಕ್ಷಮ ಪ್ರಾಧಿಕಾರವಾದ ಸರ್ಕಾರಕ್ಕೆ ಶಿಫಾರಸ್ಸುಗಳೊಂದಿಗೆ ತನಿಖಾ ವರದಿಯನ್ನು ಸಲ್ಲಿಸಿದ ನಂತರ, ಸರ್ಕಾರವು ತನಿಖಾ ವರದಿಯನ್ನು ಪರಿಶೀಲಿಸಿ, ಆರೋಪದ ಗಂಭೀರತೆಯನ್ನು ಪರಿಗಣಿಸಿ ಲಘು ದಂಡನೆಯನ್ನು ವಿಧಿಸಬಹುದಾದ ಪ್ರಕರಣವಾಗಿದ್ದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 12 ರನ್ವಯ ಸಕ್ಷಮ ಶಿಸ್ತು ಪ್ರಾಧಿಕಾರಿಗೆ ವಿಚಾರಣೆ ನಡೆಸಲು ನಿರ್ದೇಶಿಸಲು ಹಾಗೂ ಒಂದು ವೇಳೆ ಸರ್ಕಾರಿ ನೌಕರರ ವಿರುದ್ಧ ಮಾಡಲಾದ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು, ಕಠಿಣ ದಂಡನೆಯನ್ನು ವಿಧಿಸಬಹುದಾದ ಪ್ರಕರಣವೆಂದು ಕಂಡು ಬಂದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗಿಕಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು,1957ರ ನಿಯಮ 14ಎ ರ ಉಪನಿಯಮ (2)(ಎ) ರನ್ವಯ ಇಲಾಖಾ ವಿಚಾರಣೆ ಮಾಡಲು ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತರಿಗೆ ವಹಿಸುವಂತ ಸಕ್ಷಮ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ.
ಲೋಕಾಯುಕ್ತ ಸಂಸ್ಮಯಿಂದ ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಹಾಗೂ ಇತರ ಆರೋಪಗಳ ಕುರಿತಂತ ಕರ್ನಾಟಕ ನಾಗರೀಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14ಎ ರಡಿಯಲ್ಲಿ ವಿಚಾರಣೆಯನ್ನು ನಡೆಸಲು ಲೋಕಾಯುಕ್ತ ಸಂಸ್ಥೆಗೆ ವಹಿಸುವ ಸಂದರ್ಭದಲ್ಲಿ ಅದೇ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖಾ ವಿಚಾರಣೆ ನಡೆಯುತ್ತಿದ್ದರೆ ಅಥವಾ ಮುಕ್ತಾಯಗೊಂಡಿದ್ದರೆ ಅಂತಹ ಪ್ರಕರಣಗಳನ್ನು ಪರಿಶೀಲನೆ ನಡೆಸದ ಯಾಂತ್ರಿಕವಾಗಿ ಲೋಕಾಯುಕ್ತ ಸಂಸ್ಥೆಗೆ ವಹಿಸುತ್ತಿರುವುದು ಕಂಡು ಬಂದಿರುತ್ತದೆ ಎಂದು ಲೋಕಾಯುಕ್ತ ಸಂಸ್ಥೆಯು ಸ್ಪಷ್ಟಪಡಿಸುತ್ತಾ ಇಂತಹ ಸಂದರ್ಭಗಳಲ್ಲಿ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಕರಿಗೆ ತಿಳಿಸುವಂತೆ ಕೋರಲಾಗಿದೆ.
ಈ ಮಾರ್ಗಸೂಚಿ ಕ್ರಮ ಪಾಲನೆ ಕಡ್ಡಾಯ
1. ಇಲಾಖಾ ವಿಚಾರಣೆಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವಹಿಸುವ ಪೂರ್ವದಲ್ಲಿ ಸದರಿ ನೌಕರರ ವಿರುದ್ಧ ಲೋಕಾಯುಕ್ತದ 12(3)ರ ತನಿಖಾ ವರದಿಯಲ್ಲಿರುವ ಅಪಾದನೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖಾ ವಿಚಾರಣೆ ನಡೆದಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
ಒಂದು ವೇಳೆ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖಾ ವಿಚಾರಣೆ ನಡೆದಿದ್ದರೆ, ಅದರ ಸಂಬಂಧ ಹೊರಡಿಸಿರುವ ಅಂತಿಮ ಆದೇಶದ ಪ್ರತಿಯನ್ನು ಲಗತ್ತಿಸಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಮಾಹಿತಿ ಬದಗಿಸುವುದು.
5. ಮೇಲ್ಕಂಡಂತ ಸಕ್ಷಮ ಪ್ರಾಧಿಕಾರದ ಹಂತದಲ್ಲಿ ಇಲಾಖಾ ವಿಚಾರಣೆ 73, ಆರಂಭಗೊಂಡು ಇತ್ಯರ್ಥವಾಗದೇ ಇದ್ದ ಸಂದರ್ಭದಲ್ಲಿ ಇಲಾಖಾ ವಿಚಾರಣೆಯ ಸಿಪ್ರಸ್ತುತ ಹಂತದ ಮಾಹಿತಿಯನ್ನು ತಿಳಿಸುವುದು.
4. ಒಂದು ವೇಳೆ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖೆ ವಿಚಾರಣೆ ನಡೆಯುತ್ತಿದಲ್ಲಿ ಹಾಗೂ ಸರ್ಕಾರವು ಈ ವಿಚಾರಣೆಯನ್ನು ಲೋಕಾಯುಕ್ತ ಸಂಸ್ಥೆಗೆ ವಹಿಸಬೇಕೆಂದು ನಿರ್ಧರಿಸಿದಲ್ಲಿ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಿ ಆದೇಶಿಸುವುದು. ಆ ಬಳಿಕವಷ್ಟೇ ವಿಚಾರಣೆಯನ್ನು ಲೋಕಾಯುಕ್ತ ಸಂಸ್ಥೆಗೆ ವಹಿಸಿ ಆದೇಶ ಹೊರಡಿಸುವುದು.
5. ಮೇಲ್ಕಂಡ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಖಚಿತಪಡಿಸಿಕೊಂಡ ನಂತರವಷ್ಟೇ ಪ್ರಕರಣವನ್ನು ಕರ್ನಾಟಕ ನಾಗರೀಕ ಸೇವಾ (ವರ್ಗಿಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು. 1957ರ ನಿಯಮ 14ಎ ರನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವಹಿಸಲು ಕ್ರಮ ವಹಿಸುವುದು.
ಮೇಲೆ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಉಲ್ಲೇಖ (1) ಮತ್ತು (2) ರಂತ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆಯ ಲೆಕ್ಕ ಸಹಾಯಕ ವೃಂದದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ನಿಗಧಿಪಡಿಸಲಾದ ಕಾಲಮಿತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತು ಉಲ್ಲೇಖ (3) ರಂತ ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆಯು ನೀಡಿರುವ ತನಿಖಾ ವರದಿಯನ್ನು ಪರಿಶೀಲಿಸಿದ ನಂತರ ಇಲಾಖಾ ವಿಚಾರಣೆಯನ್ನು ಲೋಕಾಯುಕ್ತ ಸಂಸ್ಥೆಗೆ ವಹಿಸುವ ಸಂದರ್ಭದಲ್ಲಿ ಅನುಸರಿಸಲು ನೀಡಿರುವ ಸೂಚನೆಗಳಂತೆ ಕ್ರಮ ಕೈಗೊಳ್ಳಲು ಆಯುಕ್ತರು, ಪಂಚಾಯತ್ ರಾಜ್, ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿ (ಅಭಿವೃದ್ಧಿ) ರವರು ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.