ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲಿನ ಇಬ್ಬರು ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ..
ಶಿಕ್ಷಕರು ಮಕ್ಕಳಿಗೆ ಪಾಠ ಮಾಡೋದನ್ನು ಬಿಟ್ಟು ಏನು ಮಾಡಿದ್ರು ಅಂತ ನೀವೆ ನೋಡಿ
ಶಿವಮೊಗ್ಗ: ಶಾಲೆಯ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾದ ಬಡ್ತಿ ಮುಖ್ಯ ಶಿಕ್ಷಕ ಹಾಗೂ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ಕೊಡುವ ಜೊತೆಗೆ ಪೋಷಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸಹ ಶಿಕ್ಷಕಿಯೊಬ್ಬರನ್ನು ಶುಕ್ರವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಬಿ.ಆರ್.ಶಾಂತರಾಜಪ್ಪ ಹಾಗೂ ಅದೆ ತಾಲ್ಲೂಕಿನ ದೊಡ್ಡಗೊಪ್ಪೇನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಸವಿತಾ ಕ್ರಿಸ್ಟಿನ್ ಮೆಂಡೋನ್ಸಾ ಅಮಾನತು ಶಿಕ್ಷೆಗೊಳಗಾದವರು.
ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿ ಆಧರಿಸಿ ಇಬ್ಬರನ್ನೂ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅಮಾನತು ಆದೇಶ ಮಾಡಿದ್ದಾರೆ.
ಶಿಕ್ಷಕಿಯಿಂದ ಮಕ್ಕಳಿಗೆ ನಿಂದನೆ ಆರೋಪ: ಶಿವಮೊಗ್ಗದ ಅಂಬೇಡ್ಕರ್ ನಗರದ ಸರ್ಕಾರಿ ಉರ್ದು ಶಾಲೆಯ ಮಕ್ಕಳಲ್ಲಿ ಶಿಕ್ಷಕಿ ಕೋಮು ದ್ವೇಷ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಸರುಲ್ಲಾ ನೇತೃತ್ವದಲ್ಲಿ ಶಾಲೆಯ ಮುಖ್ಯ ಶಿಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಆದರೆ ಈ ಬಗ್ಗೆ ಡಿಡಿಪಿಐ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು ಕೂಡ ಪ್ರತಿಕ್ರಿಯೆ ನೀಡಲಿಲ್ಲ..