ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..
ಬೆಂಗಳೂರು: ಸರ್ಕಾರಿ ನೌಕರರ ನಿಯೋಜನೆ ಬಗ್ಗೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮತ್ತೆ ಹೊರಡಿಸಿದೆ. ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಸೂಚನೆಗಳು ಎನ್ನುವ ಸುತ್ತೊಲೆಯಲ್ಲಿ ರಾಜ್ಯ ಸರ್ಕಾರ ಈ ಕೆಳಕಂತೆ ಮಾರ್ಗಸೂಚನೆಯನ್ನು ಹೊರಡಿಸಿದೆ.
1. ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 16(a)(ii)ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿ ಸಮಾನಾಂತರ ಹುದ್ದೆಗೆ ನಿಯೋಜನೆ ಮೇಲೆ ಸೇವಾ ತೆರಳುವುದಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಕರ್ನಾಟಕ ನಾಗರಿಕ ನಿಯಮಾವಳಿಗಳ ನಿಯಮ 50(3)ರಲ್ಲಿ ಸರ್ಕಾರದ ವಿಶೇಷ ಆದೇಶಗಳಿರದ ಹೊರತು ಸಾಮಾನ್ಯವಾಗಿ ನಿಯೋಜನೆಯ ಅವಧಿಯನ್ನು ಐದು ವರ್ಷಗಳಿಗಿಂತ ಹೆಚ್ಚಿಗೆ ವಿಸ್ತರಿಸದಿರುವಂತೆ ಸೂಚಿಸಲಾಗಿದೆ.
2. ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾದ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013, ದಿನಾಂಕ:07.06.2013ರ ಕಂಡಿಕೆ 6(ಆ) ರಲ್ಲಿ ಯಾವುದೇ ಒಂದು ಹುದ್ದೆಗೆ ಒಂದು ಸಂದರ್ಭದಲ್ಲಿ ಮಾಡುವ ನಿಯೋಜನೆಯ ಗರಿಷ್ಠ ಅವಧಿಯು ಐದು ವರ್ಷ ಎಂದು ಸ್ಪಷ್ಟಪಡಿಸಲಾಗಿರುತ್ತದೆ.
ಮುಂದುವರೆದು, ಹಿಂದಿನ ನಿಯೋಜನೆಯ ನಂತರ ಮಾತ್ರ ಇಲಾಖೆಯಲ್ಲಿ ಎರಡು ವರ್ಷಗಳ ಚಾತುರ್ಮಾಸ್ಯ ಅವಧಿಯನ್ನು (Cooling-off period) ಮುಗಿಸಬೇಕಾಗುತ್ತದೆ ಎಂಬ ಬಗ್ಗೆಯೂ ಸಹ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಯೋಜನೆಗೆ ಸಂಬಂಧಿಸಿದಂತೆ ಈ ಕೆಳಕಂಡ ಮುಂದುವರೆದ ಸೂಚನೆಗಳನ್ನು ನೀಡಲಾಗಿದೆ:
(ಅ) ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದೇ ಇರುವ ಹುದ್ದೆಗಳಿಗೆ ನಿಯೋಜನ ಮಾಡುವುದನ್ನು ನಿರ್ಬಂಧಿಸಿದೆ.
(ಬ) ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯೊಂದಿಗೆ ನಿಯೋಜನೆಯ ಮೇಲೆ ಮುಂದುವರೆದಿರುವ ಅಧಿಕಾರಿ/ನೌಕರರು ಒಂದು ವೇಳೆ ಗರಿಷ್ಠ ಐದು ವರ್ಷಗಳ ನಿಯೋಜನಾ ಅವಧಿಯನ್ನು ಪೂರ್ಣಗೊಳಿಸಿದ್ದಲ್ಲಿ ಹಾಗೂ ಸರ್ಕಾರದ ವಿಶೇಷ ಆದೇಶಗಳಿರದೆ ಸದರಿ ನಿಯೋಜನೆಯಲ್ಲಿ ಮುಂದುವರೆದಿದ್ದಲ್ಲಿ ಅಂತಹವರನ್ನು ಮಾತ್ರ ಇಲಾಖೆಗೆ ಹಿಂತಿರುಗಿಸಲು ಕೂಡಲೇ ಕ್ರಮವಹಿಸುವುದು.
ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಯೋಜನೆಗೆ ಅವಕಾಶವಿರುವ ಹುದ್ದೆಗಳಿಗೆ ಮಾತ್ರ ಆ ಹುದ್ದೆಗೆ ಸಮಾನ ದರ್ಜೆ/ಹುದ್ದೆ ಹೊಂದಿರುವ ಅಧಿಕಾರಿ/ನೌಕರರನ್ನು ಅನಿವಾರ್ಯ ಪಸಂಗಗಳಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಿಯಮಾನುಸಾರ ನಿಯೋಜನೆಗೊಳಿಸುವುದು.
(ಡ) ಯಾವುದೇ ಇಲಾಖೆಯಲ್ಲಿಯಾದರೂ ಕೆಳದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆಯ ಹುದ್ದೆಗೆ (higher rank post) ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ ಮಾಡುವುದನ್ನು/ ನಿಯೋಜನೆಗೊಳಿಸುವುದನ್ನು ನಿರ್ಬಂಧಿಸಿದೆ.
3. ಈ ಮೇಲಿನ ಸೂಚನೆಗಳನ್ನು ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡಲಾಗಿದೆ ಅಂತ ತಿಳಿಸಿದೆ.