“ಶ್ರೀ ಆರ್ ಬಿ ಮಾಂಡ್ರೆ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ”
ಕಪ್ಪತ್ತಗಿರಿ ಫೌಂಡೇಶನ್ ರಾಜ್ಯ ಘಟಕ ಹಾಗೂ ಕಪ್ಪತ್ತಗಿರಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಗದಗ ಇವರು ಕೊಡ ಮಾಡುವ 2023-24ನೇ ಸಾಲಿನ “ಜಿಲ್ಲಾ ಉತ್ತಮ ಶಿಕ್ಷಕ” ಪ್ರಶಸ್ತಿಗೆ *ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 03 ಲಕ್ಷ್ಮೇಶ್ವರ ಶಾಲೆಯ ಶಿಕ್ಷಕರಾದ” ರಮೇಶ ಬಿ ಮಾಂಡ್ರೆ”* ಅವರು ಭಾಜನರಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಕಳೆದೆರಡು ದಶಕಗಳಿಂದ ಗಣನೀಯವಾಗಿ ಸೇವೆ ಸಲ್ಲಿಸುತ್ತಾ ಯಾವುದೇ ಫಲಾಪೇಕ್ಷೆ ಬಯಸದೆ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಒಂದು ಶ್ಲಾಘನೀಯ ಕಾರ್ಯವಾಗಿದೆ. ಈ ಎಲ್ಲಾ ಸೇವಾ ಕಾರ್ಯಗಳನ್ನು ಪರಿಗಣಿಸಿ,”ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸೆಪ್ಟೆಂಬರ್ 17 ರಂದು ಗದಗಿನ ಗುರುಭವನದಲ್ಲಿ ನಡೆಯಲಿರುವ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. *ಶಾಲೆಯ ಮುಖ್ಯೋಪಾದ್ಯಾಯರಾದ ಬಸವರಾಜ ಕುಂಬಾರ ಶಾಲೆಯ ಎಸ್ ಡಿ ಎಂ ಸಿ ಶಿಕ್ಷಕ ವರ್ಗ* ಹಾಗೂ
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಲಕ್ಷ್ಮೇಶ್ವರ ಘಟಕದ ಅಧ್ಯಕ್ಷ *ಬಸವರಾಜ ಹರ್ಲಾಪುರ ಕ ರಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ ಎಚ್ ಪಾಟೀಲ ಕಾರ್ಯದರ್ಶಿ ಚಂದ್ರು ನೇಕಾರ ಹಾಗೂ ಜಿಲ್ಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ ಎಸ್ ಹಿರೇಮಠ ಎನ್ ಪಿ ಎಸ್ ನೌಕರರ ತಾಲೂಕಾ ಅಧ್ಯಕ್ಷ ಎಫ್ ಎಸ್ ತಳವಾರ* ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.